FacebookTwitter

ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್

    User Rating:  / 0

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಕೆಲ ದಿನಗಳ ಹಿಂದಷ್ಟೇ ಸಿದ್ಧವಾಗಿರುವ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಕುರಿತು ಪಕ್ಷದೊಳಗೆ ಆಕ್ಷೇಪ ವ್ಯಕ್ತವಾಗಿದೆ.

ನಗರದ ಹೊರ ವಲಯದ ಖಾಸಗಿ ಹೊಟೇಲ್‌ನಲ್ಲಿ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿಯ 58 ಸದಸ್ಯರು ಸೇರಿ ಚರ್ಚಿಸಿ ತಯಾರಿಸಿದ ಈ ಪಟ್ಟಿಯ ಬಗ್ಗೆ ಜನಾರ್ದನ ಪೂಜಾರಿ, ಜಾಫರ್ ಷರೀಫ್, ಖರ್ಗೆ, ಧರಂಸಿಂಗ್ ಅತೃಪ್ತಿ ಹೊರಹಾಕಿದ್ದಾರೆ. ಪಟ್ಟಿ ತಯಾರಿಸುವ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಸಿದ್ಧ ಆರೋಪದ ಜತೆಗೆ ಕೆಲವು ಕ್ಷೇತ್ರಗಳಲ್ಲಿ ತಮ್ಮಿಷ್ಟದಂತೆ ಅಭ್ಯರ್ಥಿಗಳನ್ನು ಫಿಕ್ಸ್ ಮಾಡಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸುವುದಕ್ಕೆ ಸಾಧ್ಯವಾಗಿಲ್ಲ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಲೂಯಿಸಿನೋ ಫೆಲೀರೋ, ಜಿತೇಂದ್ರ ಸಿಂಗ್ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಚುನಾವಣಾ ಪರಿಶೀಲನಾ ಸಮಿತಿ ಸಭೆ ಮೊಟಕುಗೊಂಡಿದೆ.

 

 

 

Add comment




Comments   

 
0 #1 Purshortham 2013-03-26 18:52
we don have a person in this p[arty to come out and say he is a leader!!!!! the party rules says that only one person from a family but tragedy is tat the high command of the so called party itself is not following it.. wonder they couldn do things for 60 years and now with the support of incumbance they wann loot more.. thanks to BJP for making us to suffer in the hands of the most corrupted and shameless party in central to make us rule
Quote
 

 

More items in this section

ARCHIVED ARTICLES