FacebookTwitter

ಜೆಡಿಎಸ್ ಕಚೇರಿ ಕಾಂಗ್ರೆಸ್`ಗೆ ಸೇರಿದ್ದು - ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

    User Rating:  / 1
    PoorBest 

 

ಬೆಂಗಳೂರು(ಜ.21): ಜೆಡಿಎಸ್ ಪಕ್ಷಕ್ಕೆ ಯಾಕೋ ಟೈಮ್ ಸರಿಯಿಲ್ಲ ಅಂತಾ ಕಾಣುತ್ತೆ. ಅದಕ್ಕೆ ಒಂದರ ಹಿಂದೆ ಒಂದರಂತೆ ಸಮಸ್ಯೆಗಳು ಎದುರುರಾಗುತ್ತಲೇ ಇವೆ. ಈಗ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿ ಕಾಂಗ್ರೆಸ್ ಪಾಲಾಗಿದೆ.

ಜೆಡಿಎಸ್ ಕಚೇರಿ ಕಾಂಗ್ರೆಸ್‌ಗೆ ಸೇರಿದ್ದು ಎಂದು ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಜೆಡಿಎಸ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದ್ದು, ಜೆಡಿಎಸ್ ಸಲ್ಲಿಸಿದ್ದ ಮೇಲ್ಮನವಿಯನ್ನ ವಜಾಗೊಳಿಸಿದೆ. ಈ ಮೂಲಕ ಸುಪ್ರೀಂಕೋರ್ಟ್‌ನಲ್ಲೂ ಜೆಡಿಎಸ್‌ಗೆ ತೀವ್ರ ಮುಖಭಂಗ ಉಂಟಾಗಿದೆ.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿ ಕಾಂಗ್ರೆಸ್ ಸೇರಬೇಕಿದ್ದು, 2014 ಡಿಸೆಂಬರ್ 31ರೊಳಗೆ ಕಚೇರಿಯನ್ನು ಖಾಲಿ ಮಾಡುವಂತೆ ಕಾಲಾವಕಾಶ ನೀಡಿ ಆದೇಶಿಸಿದೆ.

 

 

 

Add comment




 

More items in this section