FacebookTwitter

ಉಗ್ರ ಯಾಸಿನ್ ಭಟ್ಕಳ್`ನನ್ನ ಬೆಂಗಳೂರಿಗೆ ಕರೆತಂದ ಪೊಲೀಸರು

    User Rating:  / 0
    PoorBest 

ಬೆಂಗಳೂರು(ಜ.18): ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಸ್ಟೋಟ ಪ್ರಕರಣದ ಪ್ರಮುಖ ಆರೋಪಿ ಯಾಸಿನ್ ಭಟ್ಕಳ್`ನನ್ನ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಜನವರಿ 28ರ ವರೆಗೆ ವಿಚಾರಣೆಗೆ ದೆಹಲಿಯ ಎನ್`ಐಎ ಕೋರ್ಟ್`ನಲ್ಲಿ ಅನುಮತಿ ಪಡೆದ ಬೆಂಗಳೂರು ಪೊಲೀಸರು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಿನ ಜಾವ 4 ಗಂಟೆಗೆ ಯಾಸಿನ್ ಭಟ್ಕಳ್`ನನ್ನು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ಗುಪ್ತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.

2010ರ ಎಪ್ರಿಲ್ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್`ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಸ್ಟೋಟ ಸಂಭವಿಸಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಇತ್ತೀಚೆಗೆ ನೇಪಾಳದಲ್ಲಿ ಯಾಸಿನ್ ಭಟ್ಕಳ್ ಬಂಧನವಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


 

 

 

Add comment