FacebookTwitter

ಆಷಸ್ ಸರಣಿಯಲ್ಲಿ ಇಂಗ್ಲೆಂಡ್ ವೈಟ್ ವಾಶ್: 5-0 ಅಂತರದಿಂದ ಸರಣಿ ಜಯಿಸಿದ ಆಸ್ಟ್ರೇಲಿಯಾ

ಸಿಡ್ನಿ(ಜ.05): ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಿನ ಆಷಸ್ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ. ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 281ರನ್ ಗಳ ಅಂತರದಿಂದ ಜಯ ಗಳಿಸಿದೆ. ಈ ಮೂಲಕ 5-0 ಅಂತರದಿಂದ ಆಸ್ಟ್ರೇಲಿಯಾ ಆಷಸ್ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಕೊನೆಯ ಪಂದ್ಯದಲ್ಲೂ ಹೀನಾಯ ಸೋಲು ಕಾಣುವ ಮೂಲಕ ಇಂಗ್ಲೆಂಡ್ ತಂಡ ಪ್ರತಿಷ್ಠಿತ ಆಷಸ್ ಸರಣಿಯಲ್ಲಿ ವೈಟ್ ವಾಶ್ ಆಗಿದೆ.
ಆಸ್ಟ್ರೇಲಿಯಾ ಗೆಲುವು ಸಾಧಿಸುತ್ತಿದ್ದಂತೆ ಮೈದಾನದ ತುಂಬೆಲ್ಲಾ ಗೆಲುವಿನ ಕೇಕೆ ಮುಗಿಲು ಮುಟ್ಟಿತ್ತು.

 

 

 

Add comment




 

More items in this section